2 Chronicles 19 - WEB (Kannada)

1 Jehoshaphat the king of Judah returned to his house in peace to Jerusalem.ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು.

2 Jehu the son of Hanani the seer went out to meet him, and said to king Jehoshaphat, Should you help the wicked, and love those who hate Yahweh? for this thing wrath is on you from before Yahweh.ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.

3 Nevertheless there are good things found in you, in that you have put away the Asheroth out of the land, and have set your heart to seek God.ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.

4 Jehoshaphat lived at Jerusalem: and he went out again among the people from Beersheba to the hill-country of Ephraim, and brought them back to Yahweh, the God of their fathers.ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ

5 He set judges in the land throughout all the fortified cities of Judah, city by city,ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.

6 and said to the judges, Consider what you do: for you don't judge for man, but for Yahweh; and [he is] with you in the judgment.ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.

7 Now therefore let the fear of Yahweh be on you; take heed and do it: for there is no iniquity with Yahweh our God, nor respect of persons, nor taking of bribes.ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.

8 Moreover in Jerusalem did Jehoshaphat set of the Levites and the priests, and of the heads of the fathers' [houses] of Israel, for the judgment of Yahweh, and for controversies. They returned to Jerusalem.ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--

9 He charged them, saying, Thus shall you do in the fear of Yahweh, faithfully, and with a perfect heart.ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.

10 Whenever any controversy shall come to you from your brothers who dwell in their cities, between blood and blood, between law and commandment, statutes and ordinances, you shall warn them, that they not be guilty towards Yahweh, and so wrath come on you and on your brothers: this do, and you shall not be guilty.ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.

11 Behold, Amariah the chief priest is over you in all matters of Yahweh; and Zebadiah the son of Ishmael, the ruler of the house of Judah, in all the king's matters: also the Levites shall be officers before you. Deal courageously, and Yahweh be with the good.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.

Kannada Bible