2 John 1 - WEB (Kannada)

1 The elder, to the chosen lady and her children, whom I love in truth; and not I only, but also all those who know the truth;ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

2 for the truth's sake, which remains in us, and it will be with us forever:ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.

3 Grace, mercy, and peace will be with us, from God the Father, and from the Lord Jesus Christ, the Son of the Father, in truth and love.ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.

4 I rejoice greatly that I have found some of your children walking in truth, even as we have been commanded by the Father.ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.

5 Now I beg you, dear lady, not as though I wrote to you a new commandment, but that which we had from the beginning, that we love one another.ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

6 This is love, that we should walk according to his commandments. This is the commandment, even as you heard from the beginning, that you should walk in it.ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.

7 For many deceivers have gone out into the world, those who don't confess that Jesus Christ came in the flesh. This is the deceiver and the Antichrist.ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.

8 Watch yourselves, that we don't lose the things which we have accomplished, but that we receive a full reward.ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.

9 Whoever transgresses and doesn't remain in the teaching of Christ, doesn't have God. He who remains in the teaching, the same has both the Father and the Son.ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.

10 If anyone comes to you, and doesn't bring this teaching, don't receive him into your house, and don't welcome him,ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.

11 for he who welcomes him participates in his evil works.ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

12 Having many things to write to you, I don't want to do so with paper and ink, but I hope to come to you, and to speak face to face, that our joy may be made full.ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.

13 The children of your chosen sister greet you. Amen.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್‌.

Kannada Bible