2 Peter 2 - WEB (Kannada)

1 But there also arose false prophets among the people, as among you also there will be false teachers, who will secretly bring in destructive heresies, denying even the Master who bought them, bringing on themselves swift destruction.ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ

2 Many will follow their immoral{TR reads "destructive" instead of "immoral"} ways, and as a result, the way of the truth will be maligned.ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.

3 In covetousness they will exploit you with deceptive words: whose sentence now from of old doesn't linger, and their destruction will not slumber.ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

4 For if God didn't spare angels when they sinned, but cast them down to Tartarus{Tartarus is another name for Hell}, and committed them to pits of darkness, to be reserved to judgment;ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

5 and didn't spare the ancient world, but preserved Noah with seven others, a preacher of righteousness, when he brought a flood on the world of the ungodly;ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

6 and turning the cities of Sodom and Gomorrah into ashes, condemned them to destruction, having made them an example to those who would live ungodly;ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

7 and delivered righteous Lot, who was very distressed by the lustful life of the wickedಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.

8 (for that righteous man dwelling among them, was tormented in his righteous soul from day to day with seeing and hearing lawless deeds):ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.

9 the Lord knows how to deliver the godly out of temptation and to keep the unrighteous under punishment for the day of judgment;ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

10 but chiefly those who walk after the flesh in the lust of defilement, and despise authority. Daring, self-willed, they are not afraid to speak evil of dignitaries;ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

11 whereas angels, though greater in might and power, don't bring a railing judgment against them before the Lord.ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.

12 But these, as unreasoning creatures, born natural animals to be taken and destroyed, speaking evil in matters about which they are ignorant, will in their destroying surely be destroyed,ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ

13 receiving the wages of unrighteousness; people who count it pleasure to revel in the day-time, spots and blemishes, reveling in their deceit while they feast with you;ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.

14 having eyes full of adultery, and who can't cease from sin; enticing unsettled souls; having a heart trained in greed; children of cursing;ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

15 forsaking the right way, they went astray, having followed the way of Balaam the son of Beor, who loved the wages of wrong-doing;ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

16 but he was rebuked for his own disobedience. A mute donkey spoke with man's voice and stopped the madness of the prophet.ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

17 These are wells without water, clouds driven by a storm; for whom the blackness of darkness has been reserved forever.ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.

18 For, uttering great swelling words of emptiness, they entice in the lusts of the flesh, by licentiousness, those who are indeed escaping from those who live in error;ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

19 promising them liberty, while they themselves are bondservants of corruption; for by whom a man is overcome, by the same is he also brought into bondage.ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.

20 For if, after they have escaped the defilement of the world through the knowledge of the Lord and Savior Jesus Christ, they are again entangled therein and overcome, the last state has become worse with them than the first.ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

21 For it would be better for them not to have known the way of righteousness, than, after knowing it, to turn back from the holy commandment delivered to them.ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.

22 But it has happened to them according to the true proverb, "The dog turns to his own vomit again," and "the sow that had washed to wallowing in the mire."ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.

Kannada Bible