2 Peter 2 - YLT (Kannada)
1 And there did come also false prophets among the people, as also among you there shall be false teachers, who shall bring in besides destructive sects, and the Master who bought them denying, bringing to themselves quick destruction,ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
2 and many shall follow out their destructive ways, because of whom the way of the truth shall be evil spoken of,ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
3 and in covetousness, with moulded words, of you they shall make merchandise, whose judgment of old is not idle, and their destruction doth not slumber.ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
4 For if God messengers who sinned did not spare, but with chains of thick gloom, having cast `them' down to Tartarus, did deliver `them' to judgment, having been reserved,ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
5 and the old world did not spare, but the eighth person, Noah, of righteousness a preacher, did keep, a flood on the world of the impious having brought,ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
6 and the cities of Sodom and Gomorrah having turned to ashes, with an overthrow did condemn, an example to those about to be impious having set `them';ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7 and righteous Lot, worn down by the conduct in lasciviousness of the impious, He did rescue,ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
8 for in seeing and hearing, the righteous man, dwelling among them, day by day the righteous soul with unlawful works was harassing.ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
9 The Lord hath known to rescue pious ones out of temptation, and unrighteous ones to a day of judgment, being punished, to keep,ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
10 and chiefly those going behind the flesh in desire of uncleanness, and lordship despising; presumptuous, self-complacent, dignities they are not afraid to speak evil of,ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
11 whereas messengers, in strength and power being greater, do not bear against them before the Lord an evil speaking judgment;ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
12 and these, as irrational natural beasts, made to be caught and destroyed -- in what things they are ignorant of, speaking evil -- in their destruction shall be destroyed,ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
13 about to receive a reward of unrighteousness, pleasures counting the luxury in the day, spots and blemishes, luxuriating in their deceits, feasting with you,ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
14 having eyes full of adultery, and unable to cease from sin, enticing unstable souls, having an heart exercised in covetousnesses, children of a curse,ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
15 having forsaken a right way, they did go astray, having followed in the way of Balaam the `son' of Bosor, who a reward of unrighteousness did love,ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
16 and had a rebuke of his own iniquity -- a dumb ass, in man's voice having spoken, did forbid the madness of the prophet.ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
17 These are wells without water, and clouds by a tempest driven, to whom the thick gloom of the darkness to the age hath been kept;ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
18 for overswellings of vanity speaking, they do entice in desires of the flesh -- lasciviousnesses, those who had truly escaped from those conducting themselves in error,ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19 liberty to them promising, themselves being servants of the corruption, for by whom any one hath been overcome, to this one also he hath been brought to servitude,ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
20 for, if having escaped from the pollutions of the world, in the acknowledging of the Lord and Saviour Jesus Christ, and by these again being entangled, they have been overcome, become to them hath the last things worse than the first,ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
21 for it were better to them not to have acknowledged the way of the righteousness, than having acknowledged `it', to turn back from the holy command delivered to them,ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.
22 and happened to them hath that of the true similitude; `A dog did turn back upon his own vomit,' and, `A sow having bathed herself -- to rolling in mire.'ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
Kannada Bible