Acts 13 - ASV (Kannada)

1 Now there were at Antioch, in the church that was `there', prophets and teachers, Barnabas, and Symeon that was called Niger, and Lucius of Cyrene, and Manaen the foster-brother of Herod the tetrarch, and Saul.ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

2 And as they ministered to the Lord, and fasted, the Holy Spirit said, Separate me Barnabas and Saul for the work whereunto I have called them.ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

3 Then, when they had fasted and prayed and laid their hands on them, they sent them away.ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

4 So they, being sent forth by the Holy Spirit, went down to Seleucia; and from thence they sailed to Cyprus.ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.

5 And when they were at Salamis, they proclaimed the word of God in the synagogues of the Jews: and they had also John as their attendant.ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

6 And when they had gone through the whole island unto Paphos, they found a certain sorcerer, a false prophet, a Jew, whose name was Bar-jesus;ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.

7 who was with the proconsul, Sergius Paulus, a man of understanding. The same called unto him Barnabas and Saul, and sought to hear the word of God.ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.

8 But Elymas the sorcerer (for so is his name by interpretation) withstood them, seeking to turn aside the proconsul from the faith.ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

9 But Saul, who is also `called' Paul, filled with the Holy Spirit, fastened his eyes on him,ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--

10 and said, O full of all guile and all villany, thou son of the devil, thou enemy of all righteousness, wilt thou not cease to pervert the right ways of the Lord?ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?

11 And now, behold, the hand of the Lord is upon thee, and thou shalt be blind, not seeing the sun for a season. And immediately there fell on him a mist and a darkness; and he went about seeking some to lead him by the hand.ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.

12 Then the proconsul, when he saw what was done, believed, being astonished at the teaching of the Lord.ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.

13 Now Paul and his company set sail from Paphos, and came to Perga in Pamphylia: and John departed from them and returned to Jerusalem.ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;

14 But they, passing through from Perga, came to Antioch of Pisidia; and they went into the synagogue on the sabbath day, and sat down.ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

15 And after the reading of the law and the prophets the rulers of the synagogue sent unto them, saying, Brethren, if ye have any word of exhortation for the people, say on.ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

16 And Paul stood up, and beckoning with the hand said, Men of Israel, and ye that fear God, hearken:ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.

17 The God of this people Israel chose our fathers, and exalted the people when they sojourned in the land of Egypt, and with a high arm led he them forth out of it.ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.

18 And for about the time of forty years as a nursing-father bare he them in the wilderness.ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು

19 And when he had destroyed seven nations in the land of Canaan, he gave `them' their land for an inheritance, for about four hundred and fifty years:ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.

20 and after these things he gave `them' judges until Samuel the prophet.ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.

21 And afterward they asked for a king: and God gave unto them Saul the son of Kish, a man of the tribe of Benjamin, for the space of forty years.ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.

22 And when he had removed him, he raised up David to be their king; to whom also he bare witness and said, I have found David the son of Jesse, a man after My heart, who shall do all My will.ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ

23 Of this man's seed hath God according to promise brought unto Israel a Saviour, Jesus;ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.

24 when John had first preached before his coming the baptism of repentance to all the people of Israel.ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

25 And as John was fulfilling his course, he said, What suppose ye that I am? I am not `he'. But behold, there cometh one after me the shoes of whose feet I am not worthy to unloose.ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

26 Brethren, children of the stock of Abraham, and those among you that fear God, to us is the word of this salvation sent forth.ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

27 For they that dwell in Jerusalem, and their rulers, because they knew him not, nor the voices of the prophets which are read every sabbath, fulfilled `them' by condemning `him'.ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

28 And though they found no cause of death `in him', yet asked they of Pilate that he should be slain.ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

29 And when they had fulfilled all things that were written of him, they took him down from the tree, and laid him in a tomb.ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

30 But God raised him from the dead:ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

31 and he was seen for many days of them that came up with him from Galilee to Jerusalem, who are now his witnesses unto the people.ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

32 And we bring you good tidings of the promise made unto the fathers,ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

33 that God hath fulfilled the same unto our children, in that he raised up Jesus; as also it is written in the second psalm, Thou art my Son, this day have I begotten thee.ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.

34 And as concerning that he raised him up from the dead, now no more to return to corruption, he hath spoken on this wise, I will give you the holy and sure `blessings' of David.ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.

35 Because he saith also in another `psalm', Thou wilt not give Thy Holy One to see corruption.ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.

36 For David, after he had in his own generation served the counsel of God, fell asleep, and was laid unto his fathers, and saw corruption:ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.

37 but he whom God raised up saw no corruption.ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.

38 Be it known unto you therefore, brethren, that through this man is proclaimed unto you remission of sins:ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

39 and by him every one that believeth is justified from all things, from which ye could not be justified by the law of Moses.ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

40 Beware therefore, lest that come upon `you' which is spoken in the prophets:ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.

41 Behold, ye despisers, and wonder, and perish; For I work a work in your days, A work which ye shall in no wise believe, if one declare it unto you.ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

42 And as they went out, they besought that these words might be spoken to them the next sabbath.ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

43 Now when the synagogue broke up, many of the Jews and of the devout proselytes followed Paul and Barnabas; who, speaking to them, urged them to continue in the grace of God.ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

44 And the next sabbath almost the whole city was gathered together to hear the word of God.ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.

45 But when the Jews saw the multitudes, they were filled with jealousy, and contradicted the things which were spoken by Paul, and blasphemed.ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

46 And Paul and Barnabas spake out boldly, and said, It was necessary that the word of God should first be spoken to you. Seeing ye thrust it from you, and judge yourselves unworthy of eternal life, lo, we turn to the Gentiles.ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

47 For so hath the Lord commanded us, `saying', I have set thee for a light of the Gentiles, That thou shouldest be for salvation unto the uttermost part of the earth.ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

48 And as the Gentiles heard this, they were glad, and glorified the word of God: and as many as were ordained to eternal life believed.ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.

49 And the word of the Lord was spread abroad throughout all the region.ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.

50 But the Jews urged on the devout women of honorable estate, and the chief men of the city, and stirred up a persecution against Paul and Barnabas, and cast them out of their borders.ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

51 But they shook off the dust of their feet against them, and came unto Iconium.ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.

52 And the disciples were filled with joy with the Holy Spirit.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.

Kannada Bible