Acts 13 - YLT (Kannada)

1 And there were certain in Antioch, in the assembly there, prophets and teachers; both Barnabas, and Simeon who is called Niger, and Lucius the Cyrenian, Manaen also -- Herod the tetrarch's foster-brother -- and Saul;ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

2 and in their ministering to the Lord and fasting, the Holy Spirit said, `Separate ye to me both Barnabas and Saul to the work to which I have called them,'ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

3 then having fasted, and having prayed, and having laid the hands on them, they sent `them' away.ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

4 These, indeed, then, having been sent forth by the Holy Spirit, went down to Seleucia, thence also they sailed to Cyprus,ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.

5 and having come unto Salamis, they declared the word of God in the synagogues of the Jews, and they had also John `as' a ministrant;ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

6 and having gone through the island unto Paphos, they found a certain magian, a false prophet, a Jew, whose name `is' Bar-Jesus;ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.

7 who was with the proconsul Sergius Paulus, an intelligent man; this one having called for Barnabas and Saul, did desire to hear the word of God,ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.

8 and there withstood them Elymas the magian -- for so is his name interpreted -- seeking to pervert the proconsul from the faith.ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

9 And Saul -- who also `is' Paul -- having been filled with the Holy Spirit, and having looked stedfastly on him,ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--

10 said, `O full of all guile, and all profligacy, son of a devil, enemy of all righteousness, wilt thou not cease perverting the right ways of the Lord?ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?

11 and now, lo, a hand of the Lord `is' upon thee, and thou shalt be blind, not seeing the sun for a season;' and presently there fell upon him a mist and darkness, and he, going about, was seeking some to lead `him' by the hand;ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.

12 then the proconsul having seen what hath come to pass, did believe, being astonished at the teaching of the Lord.ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.

13 And those about Paul having set sail from Paphos, came to Perga of Pamphylia, and John having departed from them, did turn back to Jerusalem,ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;

14 and they having gone through from Perga, came to Antioch of Pisidia, and having gone into the synagogue on the sabbath-day, they sat down,ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

15 and after the reading of the law and of the prophets, the chief men of the synagogue sent unto them, saying, `Men, brethren, if there be a word in you of exhortation unto the people -- say on.'ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

16 And Paul having risen, and having beckoned with the hand, said, `Men, Israelites, and those fearing God, hearken:ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.

17 the God of this people Israel did choose our fathers, and the people He did exalt in their sojourning in the land of Egypt, and with an high arm did He bring them out of it;ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.

18 and about a period of forty years He did suffer their manners in the wilderness,ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು

19 and having destroyed seven nations in the land of Canaan, He did divide by lot to them their land.ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.

20 `And after these things, about four hundred and fifty years, He gave judges -- till Samuel the prophet;ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.

21 and thereafter they asked for a king, and God did give to them Saul, son of Kish, a man of the tribe of Benjamin, for forty years;ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.

22 and having removed him, He did raise up to them David for king, to whom also having testified, he said, I found David, the `son' of Jesse, a man according to My heart, who shall do all My will.ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ

23 `Of this one's seed God, according to promise, did raise to Israel a Saviour -- Jesus,ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.

24 John having first preached, before his coming, a baptism of reformation to all the people of Israel;ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

25 and as John was fulfilling the course, he said, Whom me do ye suppose to be? I am not `he', but, lo, he doth come after me, of whom I am not worthy to loose the sandal of `his' feet.ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

26 `Men, brethren, sons of the race of Abraham, and those among you fearing God, to you was the word of this salvation sent,ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

27 for those dwelling in Jerusalem, and their chiefs, this one not having known, also the voices of the prophets, which every sabbath are being read -- having judged `him' -- did fulfill,ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

28 and no cause of death having found, they did ask of Pilate that he should be slain,ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

29 and when they did complete all the things written about him, having taken `him' down from the tree, they laid him in a tomb;ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

30 and God did raise him out of the dead,ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

31 and he was seen for many days of those who did come up with him from Galilee to Jerusalem, who are his witnesses unto the people.ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

32 `And we to you do proclaim good news -- that the promise made unto the fathers,ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

33 God hath in full completed this to us their children, having raised up Jesus, as also in the second Psalm it hath been written, My Son thou art -- I to-day have begotten thee.ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.

34 `And that He did raise him up out of the dead, no more to return to corruption, he hath said thus -- I will give to you the faithful kindnesses of David;ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.

35 wherefore also in another `place' he saith, Thou shalt not give Thy kind One to see corruption,ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.

36 for David, indeed, his own generation having served by the will of God, did fall asleep, and was added unto his fathers, and saw corruption,ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.

37 but he whom God did raise up, did not see corruption.ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.

38 `Let it therefore be known to you, men, brethren, that through this one to you is the forgiveness of sins declared,ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

39 and from all things from which ye were not able in the law of Moses to be declared righteous, in this one every one who is believing is declared righteous;ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

40 see, therefore, it may not come upon you that hath been spoken in the prophets:ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.

41 See, ye despisers, and wonder, and perish, because a work I -- I do work in your days, a work in which ye may not believe, though any one may declare `it' to you.'ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

42 And having gone forth out of the synagogue of the Jews, the nations were calling upon `them' that on the next sabbath these sayings may be spoken to them,ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

43 and the synagogue having been dismissed, many of the Jews and of the devout proselytes did follow Paul and Barnabas, who, speaking to them, were persuading them to remain in the grace of God.ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

44 And on the coming sabbath, almost all the city was gathered together to hear the word of God,ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.

45 and the Jews having seen the multitudes, were filled with zeal, and did contradict the things spoken by Paul -- contradicting and speaking evil.ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

46 And speaking boldly, Paul and Barnabas said, `To you it was necessary that first the word of God be spoken, and seeing ye do thrust it away, and do not judge yourselves worthy of the life age-during, lo, we do turn to the nations;ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

47 for so hath the Lord commanded us: I have set thee for a light of nations -- for thy being for salvation unto the end of the earth.'ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

48 And the nations hearing were glad, and were glorifying the word of the Lord, and did believe -- as many as were appointed to life age-during;ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.

49 and the word of the Lord was spread abroad through all the region.ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.

50 And the Jews stirred up the devout and honourable women, and the first men of the city, and did raise persecution against Paul and Barnabas, and did put them out from their borders;ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

51 and they having shaken off the dust of their feet against them, came to Iconium,ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.

52 and the disciples were filled with joy and the Holy Spirit.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.

Kannada Bible