Acts 5 - WEB (Kannada)
1 But a certain man named Ananias, with Sapphira, his wife, sold a possession,ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
2 and kept back part of the price, his wife also being aware of it, and brought a certain part, and laid it at the apostles' feet.ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
3 But Peter said, "Ananias, why has Satan filled your heart to lie to the Holy Spirit, and to keep back part of the price of the land?ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
4 While you kept it, didn't it remain your own? After it was sold, wasn't it in your power? How is it that you have conceived this thing in your heart? You haven't lied to men, but to God."ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
5 Ananias, hearing these words, fell down and died. Great fear came on all who heard these things.ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
6 The young men arose and wrapped him up, and they carried him out and buried him.ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
7 About three hours later, his wife, not knowing what had happened, came in.ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
8 Peter answered her, "Tell me whether you sold the land for so much." She said, "Yes, for so much."ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
9 But Peter asked her, "How is it that you have agreed together to tempt the Spirit of the Lord? Behold, the feet of those who have buried your husband are at the door, and they will carry you out."ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
10 She fell down immediately at his feet, and died. The young men came in and found her dead, and they carried her out and buried her by her husband.ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
11 Great fear came on the whole assembly, and on all who heard these things.ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
12 By the hands of the apostles many signs and wonders were done among the people. They were all with one accord in Solomon's porch.ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
13 None of the rest dared to join them, however the people honored them.ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
14 More believers were added to the Lord, multitudes of both men and women.ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
15 They even carried out the sick into the streets, and laid them on cots and mattresses, so that as Peter came by, at the least his shadow might overshadow some of them.ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
16 Multitudes also came together from the cities around Jerusalem, bringing sick people, and those who were tormented by unclean spirits: and they were all healed.ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
17 But the high priest rose up, and all those who were with him (which is the sect of the Sadducees), and they were filled with jealousy,ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
18 and laid hands on the apostles, and put them in public custody.ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
19 But an angel of the Lord opened the prison doors by night, and brought them out, and said,ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
20 "Go stand and speak in the temple to the people all the words of this life."ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
21 When they heard this, they entered into the temple about daybreak, and taught. But the high priest came, and those who were with him, and called the council together, and all the senate of the children of Israel, and sent to the prison to have them brought.ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
22 But the officers who came didn't find them in the prison. They returned and reported,ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
23 "We found the prison shut and locked, and the guards standing before the doors, but when we opened them, we found no one inside!"ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
24 Now when the high priest, the captain of the temple, and the chief priests heard these words, they were very perplexed about them and what might become of this.ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
25 One came and told them, "Behold, the men whom you put in prison are in the temple, standing and teaching the people."ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
26 Then the captain went with the officers, and brought them without violence, for they were afraid that the people might stone them.ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
27 When they had brought them, they set them before the council. The high priest questioned them,ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
28 saying, "Didn't we strictly charge you not to teach in this name? Behold, you have filled Jerusalem with your teaching, and intend to bring this man's blood on us."ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
29 But Peter and the apostles answered, "We must obey God rather than men.ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
30 The God of our fathers raised up Jesus, whom you killed, hanging him on a tree.ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
31 God exalted him with his right hand to be a Prince and a Savior, to give repentance to Israel, and remission of sins.ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
32 We are His witnesses of these things; and so also is the Holy Spirit, whom God has given to those who obey him."ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
33 But they, when they heard this, were cut to the heart, and determined to kill them.ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
34 But one stood up in the council, a Pharisee named Gamaliel, a teacher of the law, honored by all the people, and commanded to put the apostles out for a little while.ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
35 He said to them, "You men of Israel, be careful concerning these men, what you are about to do.ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
36 For before these days Theudas rose up, making himself out to be somebody; to whom a number of men, about four hundred, joined themselves: who was slain; and all, as many as obeyed him, were dispersed, and came to nothing.ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
37 After this man, Judas of Galilee rose up in the days of the enrollment, and drew away some people after him. He also perished, and all, as many as obeyed him, were scattered abroad.ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
38 Now I tell you, withdraw from these men, and leave them alone. For if this counsel or this work is of men, it will be overthrown.ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
39 But if it is of God, you will not be able to overthrow it, and you would be found even to be fighting against God!"ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
40 They agreed with him. Summoning the apostles, they beat them and charged them not to speak in the name of Jesus, and let them go.ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
41 They therefore departed from the presence of the council, rejoicing that they were counted worthy to suffer dishonor for Jesus' name.ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
42 Every day, in the temple and at home, they never stopped teaching and preaching Jesus, the Christ.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Kannada Bible