Isaiah 47:2 ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
Isaiah 47:2 in Other Translations
King James Version (KJV) Take the millstones, and grind meal: uncover thy locks, make bare the leg, uncover the thigh, pass over the rivers.
American Standard Version (ASV) Take the millstones, and grind meal; remove thy veil, strip off the train, uncover the leg, pass through the rivers.
Bible in Basic English (BBE) Take the crushing-stones and get the meal crushed: take off your veil, put away your robe, let your legs be uncovered, go through the rivers.
Darby English Bible (DBY) Take the millstones, and grind meal; remove thy veil, lift up the train, uncover the leg, pass over rivers:
World English Bible (WEB) Take the millstones, and grind meal; remove your veil, strip off the train, uncover the leg, pass through the rivers.
Young's Literal Translation (YLT) Take millstones, and grind flour, Remove thy veil, draw up the skirt, Uncover the leg, pass over the floods.
Read Full Chapter :
Isaiah 47
Cross Reference
ಮತ್ತಾಯನು 24:41
ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
ವಿಮೋಚನಕಾಂಡ 11:5
ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
ನ್ಯಾಯಸ್ಥಾಪಕರು 16:21
ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
ಯೋಬನು 31:10
ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
ಯೆಶಾಯ 20:4
ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
ಯೆರೆಮಿಯ 27:7
ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
ಪ್ರಲಾಪಗಳು 5:13
ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
ಯೆಹೆಜ್ಕೇಲನು 16:37
ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
ಆದಿಕಾಂಡ 24:65
ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
ಮಿಕ 1:11
ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
ನಹೂಮ 3:5
ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
ಲೂಕನು 17:35
ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
ಹೋಶೇ 2:3
ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
ಯೆಶಾಯ 3:17
ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
ಯೆಶಾಯ 32:11
ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
ಯೆರೆಮಿಯ 13:22
ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
ಯೆರೆಮಿಯ 13:26
ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.