Isaiah 7 - WEB (Kannada)

1 It happened in the days of Ahaz the son of Jotham, the son of Uzziah, king of Judah, that Rezin the king of Syria, and Pekah the son of Remaliah, king of Israel, went up to Jerusalem to war against it, but could not prevail against it.ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.

2 It was told the house of David, saying, "Syria is allied with Ephraim." His heart trembled, and the heart of his people, as the trees of the forest tremble with the wind.ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.

3 Then Yahweh said to Isaiah, "Go out now to meet Ahaz, you, and Shearjashub your son, at the end of the conduit of the upper pool, on the highway of the fuller's field.ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--

4 Tell him, 'Be careful, and keep calm. Don't be afraid, neither let your heart be faint because of these two tails of smoking firebrands, for the fierce anger of Rezin and Syria, and of the son of Remaliah.ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

5 Because Syria, Ephraim, and the son of Remaliah, have plotted evil against you, saying,ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ,

6 "Let's go up against Judah, and tear it apart, and let's divide it among ourselves, and set up a king in the midst of it, even the son of Tabeel."ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು

7 This is what the Lord Yahweh says: "It shall not stand, neither shall it happen."ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.

8 For the head of Syria is Damascus, and the head of Damascus is Rezin; and within sixty-five years Ephraim shall be broken in pieces, so that it shall not be a people;ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.

9 and the head of Ephraim is Samaria, and the head of Samaria is Remaliah's son. If you will not believe, surely you shall not be established.'"ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.

10 Yahweh spoke again to Ahaz, saying,ಇದಲ್ಲದೆ ಕರ್ತನು ಆಹಾಜನಿಗೆ --

11 "Ask a sign of Yahweh your God; ask it either in the depth, or in the height above."ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.

12 But Ahaz said, "I will not ask, neither will I tempt Yahweh."ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.

13 He said, "Listen now, house of David: Is it not enough for you to try the patience of men, that you will try the patience of my God also?ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?

14 Therefore the Lord himself will give you a sign. Behold, the virgin will conceive, and bear a son, and shall call his name Immanuel.{"Immanuel" means "God with us."}ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್‌ ಎಂದು ಕರೆಯುವರು.

15 He shall eat butter and honey when he knows to refuse the evil, and choose the good.ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.

16 For before the child knows to refuse the evil, and choose the good, the land whose two kings you abhor shall be forsaken.ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.

17 Yahweh will bring on you, on your people, and on your father's house, days that have not come, from the day that Ephraim departed from Judah; even the king of Assyria.ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.

18 It will happen in that day that Yahweh will whistle for the fly that is in the uttermost part of the rivers of Egypt, and for the bee that is in the land of Assyria.ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.

19 They shall come, and shall all rest in the desolate valleys, in the clefts of the rocks, on all thorn-hedges, and on all pastures.ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.

20 In that day the Lord will shave with a razor that is hired in the parts beyond the River, even with the king of Assyria, the head and the hair of the feet; and it shall also consume the beard.ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.

21 It shall happen in that day that a man shall keep alive a young cow, and two sheep;ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.

22 and it shall happen, that because of the abundance of milk which they shall give he shall eat butter: for everyone will eat butter and honey that is left in the midst of the land.ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.

23 It will happen in that day that every place where there were a thousand vines at a thousand silver shekels, shall be for briers and thorns.ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.

24 People will go there with arrows and with bow, because all the land will be briers and thorns.ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.

25 All the hills that were cultivated with the hoe, you shall not come there for fear of briers and thorns; but it shall be for the sending forth of oxen, and for the treading of sheep."ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.

Kannada Bible