John 13 - DBY (Kannada)
1 Now before the feast of the passover, Jesus, knowing that his hour had come that he should depart out of this world to the Father, having loved his own who were in the world, loved them to the end.1 ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
2 And during supper, the devil having already put it into the heart of Judas [son] of Simon, Iscariote, that he should deliver him up,ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
3 [Jesus,] knowing that the Father had given him all things into his hands, and that he came out from God and was going to God,ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
4 rises from supper and lays aside his garments, and having taken a linen towel he girded himself:ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
5 then he pours water into the washhand basin, and began to wash the feet of the disciples, and to wipe them with the linen towel with which he was girded.ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
6 He comes therefore to Simon Peter; and *he* says to him, Lord, dost thou wash *my* feet?ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
7 Jesus answered and said to him, What I do thou dost not know now, but thou shalt know hereafter.ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
8 Peter says to him, Thou shalt never wash my feet. Jesus answered him, Unless I wash thee, thou hast not part with me.ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
9 Simon Peter says to him, Lord, not my feet only, but also my hands and my head.ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
10 Jesus says to him, He that is washed all over needs not to wash save his feet, but is wholly clean; and ye are clean, but not all.ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
11 For he knew him that delivered him up: on account of this he said, Ye are not all clean.ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
12 When therefore he had washed their feet, and taken his garments, having sat down again, he said to them, Do ye know what I have done to you?ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
13 Ye call me the Teacher and the Lord, and ye say well, for I am [so].ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
14 If I therefore, the Lord and the Teacher, have washed your feet, ye also ought to wash one another's feet;ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
15 for I have given you an example that, as I have done to you, ye should do also.ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
16 Verily, verily, I say to you, The bondman is not greater than his lord, nor the sent greater than he who has sent him.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17 If ye know these things, blessed are ye if ye do them.ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
18 I speak not of you all. I know those whom I have chosen; but that the scripture might be fulfilled, He that eats bread with me has lifted up his heel against me.ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
19 I tell you [it] now before it happens, that when it happens, ye may believe that I am [he].ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
20 Verily, verily, I say to you, He who receives whomsoever I shall send receives me; and he that receives me receives him who has sent me.ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
21 Having said these things, Jesus was troubled in spirit, and testified and said, Verily, verily, I say to you, that one of you shall deliver me up.ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
22 The disciples therefore looked one on another, doubting of whom he spoke.ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
23 Now there was at table one of his disciples in the bosom of Jesus, whom Jesus loved.ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
24 Simon Peter makes a sign therefore to him to ask who it might be of whom he spoke.ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
25 But he, leaning on the breast of Jesus, says to him, Lord, who is it?ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
26 Jesus answers, He it is to whom I, after I have dipped the morsel, give it. And having dipped the morsel, he gives it to Judas [son] of Simon, Iscariote.ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
27 And, after the morsel, then entered Satan into him. Jesus therefore says to him, What thou doest, do quickly.ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
28 But none of those at table knew why he said this to him;ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
29 for some supposed, because Judas had the bag, that Jesus was saying to him, Buy the things of which we have need for the feast; or that he should give something to the poor.ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
30 Having therefore received the morsel, he went out immediately; and it was night.ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
31 When therefore he was gone out Jesus says, Now is the Son of man glorified, and God is glorified in him.ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
32 If God be glorified in him, God also shall glorify him in himself, and shall glorify him immediately.ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
33 Children, yet a little while I am with you. Ye shall seek me; and, as I said to the Jews, Where I go ye cannot come, I say to you also now.ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
34 A new commandment I give to you, that ye love one another; as I have loved you, that ye also love one another.ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
35 By this shall all know that ye are disciples of mine, if ye have love amongst yourselves.ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
36 Simon Peter says to him, Lord, where goest thou? Jesus answered him, Where I go thou canst not follow me now, but thou shalt follow me after.ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
37 Peter says to him, Lord, why cannot I follow thee now? I will lay down my life for thee.ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.
38 Jesus answers, Thou wilt lay down thy life for me! Verily, verily, I say to thee, The cock shall not crow till thou hast denied me thrice.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Kannada Bible