John 2 - ASV (Kannada)

1 And the third day there was a marriage in Cana of Galilee; and the mother of Jesus was there:ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.

2 and Jesus also was bidden, and his disciples, to the marriage.ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.

3 And when the wine failed, the mother of Jesus saith unto him, They have no wine.ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.

4 And Jesus saith unto her, Woman, what have I to do with thee? mine hour is not yet come.ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.

5 His mother saith unto the servants, Whatsoever he saith unto you, do it.ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.

6 Now there were six waterpots of stone set there after the Jews' manner of purifying, containing two or three firkins apiece.ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.

7 Jesus saith unto them, Fill the waterpots with water. And they filled them up to the brim.ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.

8 And he saith unto them, Draw out now, and bear unto the ruler of the feast. And they bare it.ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.

9 And when the ruler of the feast tasted the water now become wine, and knew not whence it was (but the servants that had drawn the water knew), the ruler of the feast calleth the bridegroom,ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು

10 and saith unto him, Every man setteth on first the good wine; and when `men' have drunk freely, `then' that which is worse: thou hast kept the good wine until now.ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.

11 This beginning of his signs did Jesus in Cana of Galilee, and manifested his glory; and his disciples believed on him.ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.

12 After this he went down to Capernaum, he, and his mother, and `his' brethren, and his disciples; and there they abode not many days.ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.

13 And the passover of the Jews was at hand, and Jesus went up to Jerusalem.ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ

14 And he found in the temple those that sold oxen and sheep and doves, and the changers of money sitting:ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;

15 and he made a scourge of cords, and cast all out of the temple, both the sheep and the oxen; and he poured out the changers' money, and overthrew their tables;ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.

16 and to them that sold the doves he said, Take these things hence; make not my Father's house a house of merchandise.ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.

17 His disciples remembered that it was written, Zeal for thy house shall eat me up.ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

18 The Jews therefore answered and said unto him, What sign showest thou unto us, seeing that thou doest these things?ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.

19 Jesus answered and said unto them, Destroy this temple, and in three days I will raise it up.ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

20 The Jews therefore said, Forty and six years was this temple in building, and wilt thou raise it up in three days?ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.

21 But he spake of the temple of his body.ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.

22 When therefore he was raised from the dead, his disciples remembered that he spake this; and they believed the scripture, and the word which Jesus had said.ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.

23 Now when he was in Jerusalem at the passover, during the feast, many believed on his name, beholding his signs which he did.ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

24 But Jesus did not trust himself unto them, for that he knew all men,ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.

25 and because he needed not that any one should bear witness concerning man; for he himself knew what was in man.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.

Kannada Bible