John 7 - DBY (Kannada)

1 And after these things Jesus walked in Galilee, for he would not walk in Judaea, because the Jews sought to kill him.ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.

2 Now the tabernacles, the feast of the Jews, was near.ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.

3 His brethren therefore said to him, Remove hence and go into Judaea, that thy disciples also may see thy works which thou doest;ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;

4 for no one does anything in secret and himself seeks to be [known] in public. If thou doest these things, manifest thyself to the world:ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.

5 for neither did his brethren believe on him.ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.

6 Jesus therefore says to them, My time is not yet come, but your time is always ready.ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.

7 The world cannot hate you, but me it hates, because I bear witness concerning it that its works are evil.ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.

8 Ye, go ye up to this feast. I go not up to this feast, for *my* time is not yet fulfilled.ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.

9 Having said these things to them he abode in Galilee.ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.

10 But when his brethren had gone up, then he himself also went up to the feast, not openly, but as in secret.ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.

11 The Jews therefore sought him at the feast, and said, Where is he?ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.

12 And there was much murmuring concerning him among the crowds. Some said, He is [a] good [man]; others said, No; but he deceives the crowd.ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.

13 However, no one spoke openly concerning him on account of [their] fear of the Jews.ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.

14 But when it was now the middle of the feast, Jesus went up into the temple and taught.ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.

15 The Jews therefore wondered, saying, How knows this [man] letters, having never learned?ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.

16 Jesus therefore answered them and said, My doctrine is not mine, but [that] of him that has sent me.ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.

17 If any one desire to practise his will, he shall know concerning the doctrine, whether it is of God, or [that] I speak from myself.ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.

18 He that speaks from himself seeks his own glory; but he that seeks the glory of him that has sent him, he is true, and unrighteousness is not in him.ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.

19 Has not Moses given you the law, and no one of you practises the law? Why do ye seek to kill me?ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.

20 The crowd answered [and said], Thou hast a demon: who seeks to kill thee?ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.

21 Jesus answered and said to them, I have done one work, and ye all wonder.ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ

22 Therefore Moses gave you circumcision (not that it is of Moses, but of the fathers), and ye circumcise a man on sabbath.ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.

23 If a man receives circumcision on sabbath, that the law of Moses may not be violated, are ye angry with me because I have made a man entirely sound on sabbath?ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?

24 Judge not according to sight, but judge righteous judgment.ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

25 Some therefore of those of Jerusalem said, Is not this he whom they seek to kill?ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?

26 and behold, he speaks openly, and they say nothing to him. Have the rulers then indeed recognised that this is the Christ?ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?

27 But [as to] this [man] we know whence he is. Now [as to] the Christ, when he comes, no one knows whence he is.ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.

28 Jesus therefore cried out in the temple, teaching and saying, Ye both know me and ye know whence I am; and I am not come of myself, but he that sent me is true, whom ye do not know.ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.

29 I know him, because I am from him, and *he* has sent me.ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.

30 They sought therefore to take him; and no one laid his hand upon him, because his hour had not yet come.ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.

31 But many of the crowd believed on him, and said, Will the Christ, when he comes, do more signs than those which this [man] has done?ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.

32 The Pharisees heard the crowd murmuring these things concerning him, and the Pharisees and the chief priests sent officers that they might take him.ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.

33 Jesus therefore said, Yet a little while I am with you, and I go to him that has sent me.ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.

34 Ye shall seek me and shall not find [me], and where I am ye cannot come.ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.

35 The Jews therefore said to one another, Where is he about to go that we shall not find him? Is he about to go to the dispersion among the Greeks, and teach the Greeks?ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?

36 What word is this which he said, Ye shall seek me and shall not find [me]; and where I am ye cannot come?ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.

37 In the last, the great day of the feast, Jesus stood and cried saying, If any one thirst, let him come to me and drink.ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

38 He that believes on me, as the scripture has said, out of his belly shall flow rivers of living water.ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.

39 But this he said concerning the Spirit, which they that believed on him were about to receive; for [the] Spirit was not yet, because Jesus had not yet been glorified.(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)

40 [Some] out of the crowd therefore, having heard this word, said, This is truly the prophet.ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.

41 Others said, This is the Christ. Others said, Does then the Christ come out of Galilee?ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?

42 Has not the scripture said that the Christ comes of the seed of David, and from the village of Bethlehem, where David was?ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.

43 There was a division therefore in the crowd on account of him.ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;

44 But some of them desired to take him, but no one laid hands upon him.ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

45 The officers therefore came to the chief priests and Pharisees, and they said to them, Why have ye not brought him?ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.

46 The officers answered, Never man spoke thus, as this man [speaks].ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.

47 The Pharisees therefore answered them, Are ye also deceived?ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?

48 Has any one of the rulers believed on him, or of the Pharisees?ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?

49 But this crowd, which does not know the law, are accursed.ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.

50 Nicodemus says to them (being one of themselves),ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)

51 Does our law judge a man before it have first heard from himself, and know what he does?ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.

52 They answered and said to him, Art thou also of Galilee? Search and look, that no prophet arises out of Galilee.ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.

53 And every one went to his home.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.

Kannada Bible