Luke 18 - WEB (Kannada)

1 He also spoke a parable to them that they must always pray, and not give up,ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--

2 saying, "There was a judge in a certain city who didn't fear God, and didn't respect man.ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.

3 A widow was in that city, and she often came to him, saying, 'Defend me from my adversary!'ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.

4 He wouldn't for a while, but afterward he said to himself, 'Though I neither fear God, nor respect man,ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.

5 yet because this widow bothers me, I will defend her, or else she will wear me out by her continual coming.'"ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.

6 The Lord said, "Listen to what the unrighteous judge says.ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.

7 Won't God avenge his chosen ones, who are crying out to him day and night, and yet he exercises patience with them?ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?

8 I tell you that he will avenge them quickly. Nevertheless, when the Son of Man comes, will he find faith on the earth?"ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.

9 He spoke also this parable to certain people who were convinced of their own righteousness, and who despised all others.ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.

10 "Two men went up into the temple to pray; one was a Pharisee, and the other was a tax collector.ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.

11 The Pharisee stood and prayed to himself like this: 'God, I thank you, that I am not like the rest of men, extortioners, unrighteous, adulterers, or even like this tax collector.ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

12 I fast twice a week. I give tithes of all that I get.'ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.

13 But the tax collector, standing far away, wouldn't even lift up his eyes to heaven, but beat his breast, saying, 'God, be merciful to me, a sinner!'ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.

14 I tell you, this man went down to his house justified rather than the other; for everyone who exalts himself will be humbled, but he who humbles himself will be exalted."ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

15 They were also bringing their babies to him, that he might touch them. But when the disciples saw it, they rebuked them.ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.

16 Jesus summoned them, saying, "Allow the little children to come to me, and don't hinder them, for the Kingdom of God belongs to such as these.ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.

17 Most assuredly, I tell you, whoever doesn't receive the Kingdom of God like a little child, he will in no way enter into it."ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

18 A certain ruler asked him, saying, "Good Teacher, what shall I do to inherit eternal life?"ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

19 Jesus asked him, "Why do you call me good? No one is good, except one--God.ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.

20 You know the commandments: 'Don't commit adultery,' 'Don't murder,' 'Don't steal,' 'Don't give false testimony,' 'Honor your father and your mother.'"ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.

21 He said, "I have observed all these things from my youth up."ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.

22 When Jesus heard these things, he said to him, "You still lack one thing. Sell all that you have, and distribute it to the poor. You will have treasure in heaven. Come, follow me."ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.

23 But when he heard these things, he became very sad, for he was very rich.ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.

24 Jesus, seeing that he became very sad, said, "How hard it is for those who have riches to enter into the Kingdom of God!ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.

25 For it is easier for a camel to enter in through a needle's eye, than for a rich man to enter into the Kingdom of God."ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.

26 Those who heard it said, "Then who can be saved?"ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.

27 But he said, "The things which are impossible with men are possible with God."ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.

28 Peter said, "Look, we have left everything, and followed you."ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ

29 He said to them, "Most assuredly I tell you, there is no one who has left house, or wife, or brothers, or parents, or children, for the Kingdom of God's sake,ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು

30 who will not receive many times more in this time, and in the world to come, eternal life."ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.

31 He took the twelve aside, and said to them, "Behold, we are going up to Jerusalem, and all the things that are written through the prophets concerning the Son of Man will be completed.ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

32 For he will be delivered up to the Gentiles, will be mocked, treated shamefully, and spit on.ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.

33 They will scourge and kill him. On the third day, he will rise again."ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

34 They understood none of these things. This saying was hidden from them, and they didn't understand the things that were said.ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.

35 It happened, as he came near Jericho, a certain blind man sat by the road, begging.ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;

36 Hearing a multitude going by, he asked what this meant.ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.

37 They told him that Jesus of Nazareth was passing by.ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.

38 He cried out, "Jesus, you son of David, have mercy on me!"ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.

39 Those who led the way rebuked him, that he should be quiet; but he cried out all the more, "You son of David, have mercy on me!"ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.

40 Standing still, Jesus commanded him to be brought to him. When he had come near, he asked him,ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--

41 "What do you want me to do?" He said, "Lord, that I may see again."ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.

42 Jesus said to him, "Receive your sight. Your faith has healed you."ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.

43 Immediately he received his sight, and followed him, glorifying God. All the people, when they saw it, praised God.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.

Kannada Bible