Mark 10 - ASV (Kannada)
1 And he arose from thence and cometh into the borders of Judaea and beyond the Jordan: and multitudes come together unto him again; and, as he was wont, he taught them again.ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
2 And there came unto him Pharisees, and asked him, Is it lawful for a man to put away `his' wife? trying him.ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
3 And he answered and said unto them, What did Moses command you?ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.
4 And they said, Moses suffered to write a bill of divorcement, and to put her away.ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
5 But Jesus said unto them, For your hardness of heart he wrote you this commandment.ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
6 But from the beginning of the creation, Male and female made he them.ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
7 For this cause shall a man leave his father and mother, and shall cleave to his wife;ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
8 and the two shall become one flesh: so that they are no more two, but one flesh.ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
9 What therefore God hath joined together, let not man put asunder.ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
10 And in the house the disciples asked him again of this matter.ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು.
11 And he saith unto them, Whosoever shall put away his wife, and marry another, committeth adultery against her:ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.
12 and if she herself shall put away her husband, and marry another, she committeth adultery.ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
13 And they were bringing unto him little children, that he should touch them: and the disciples rebuked them.ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.
14 But when Jesus saw it, he was moved with indignation, and said unto them, Suffer the little children to come unto me; forbid them not: for to such belongeth the kingdom of God.ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
15 Verily I say unto you, Whosoever shall not receive the kingdom of God as a little child, he shall in no wise enter therein.ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
16 And he took them in his arms, and blessed them, laying his hands upon them.ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.
17 And as he was going forth into the way, there ran one to him, and kneeled to him, and asked him, Good Teacher, what shall I do that I may inherit eternal life?ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
18 And Jesus said unto him, Why callest thou me good? none is good save one, `even' God.ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
19 Thou knowest the commandments, Do not kill, Do not commit adultery, Do not steal, Do not bear false witness, Do not defraud, Honor thy father and mother.ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
20 And he said unto him, Teacher, all these things have I observed from my youth.ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
21 And Jesus looking upon him loved him, and said unto him, One thing thou lackest: go, sell whatsoever thou hast, and give to the poor, and thou shalt have treasure in heaven: and come, follow me.ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
22 But his countenance fell at the saying, and he went away sorrowful: for he was one that had great possessions.ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
23 And Jesus looked round about, and saith unto his disciples, How hardly shall they that have riches enter into the kingdom of God!ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
24 And the disciples were amazed at his words. But Jesus answereth again, and saith unto them, Children, how hard is it for them that trust in riches to enter into the kingdom of God!ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
25 It is easier for a camel to go through a needle's eye, than for a rich man to enter into the kingdom of God.ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
26 And they were astonished exceedingly, saying unto him, Then who can be saved?ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
27 Jesus looking upon them saith, With men it is impossible, but not with God: for all things are possible with God.ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
28 Peter began to say unto him, Lo, we have left all, and have followed thee.ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
29 Jesus said, Verily I say unto you, There is no man that hath left house, or brethren, or sisters, or mother, or father, or children, or lands, for my sake, and for the gospel's sake,ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
30 but he shall receive a hundredfold now in this time, houses, and brethren, and sisters, and mothers, and children, and lands, with persecutions; and in the world to come eternal life.ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
31 But many `that are' first shall be last; and the last first.ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
32 And they were on the way, going up to Jerusalem; and Jesus was going before them: and they were amazed; and they that followed were afraid. And he took again the twelve, and began to tell them the things that were to happen unto him,ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
33 `saying', Behold, we go up to Jerusalem; and the Son of man shall be delivered unto the chief priests and the scribes; and they shall condemn him to death, and shall deliver him unto the Gentiles:ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
34 and they shall mock him, and shall spit upon him, and shall scourge him, and shall kill him; and after three days he shall rise again.ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
35 And there come near unto him James and John, the sons of Zebedee, saying unto him, Teacher, we would that thou shouldest do for us whatsoever we shall ask of thee.ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
36 And he said unto them, What would ye that I should do for you?ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
37 And they said unto him, Grant unto us that we may sit, one on thy right hand, and one on `thy' left hand, in thy glory.ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
38 But Jesus said unto them, Ye know not what ye ask. Are ye able to drink the cup that I drink? or to be baptized with the baptism that I am baptized with?ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
39 And they said unto him, We are able. And Jesus said unto them, The cup that I drink ye shall drink; and with the baptism that I am baptized withal shall ye be baptized:ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
40 but to sit on my right hand or on `my' left hand is not mine to give; but `it is for them' for whom it hath been prepared.ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
41 And when the ten heard it, they began to be moved with indignation concerning James and John.ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು.
42 And Jesus called them to him, and saith unto them, Ye know that they who are accounted to rule over the Gentiles lord it over them; and their great ones exercise authority over them.ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
43 But it is not so among you: but whosoever would become great among you, shall be your minister;ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
44 and whosoever would be first among you, shall be servant of all.ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು.
45 For the Son of man also came not to be ministered unto, but to minister, and to give his life a ransom for many.ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
46 And they come to Jericho: and as he went out from Jericho, with his disciples and a great multitude, the son of Timaeus, Bartimaeus, a blind beggar, was sitting by the way side.ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
47 And when he heard that it was Jesus the Nazarene, he began to cry out, and say, Jesus, thou son of David, have mercy on me.ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
48 And many rebuked him, that he should hold his peace: but he cried out the more a great deal, Thou son of David, have mercy on me.ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
49 And Jesus stood still, and said, Call ye him. And they call the blind man, saying unto him, Be of good cheer: rise, he calleth thee.ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
50 And he, casting away his garment, sprang up, and came to Jesus.ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.
51 And Jesus answered him, and said, What wilt thou that I should do unto thee? And the blind man said unto him, Rabboni, that I may receive my sight.ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.
52 And Jesus said unto him, Go thy way; thy faith hath made thee whole. And straightway he received his sight, and followed him in the way.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
Kannada Bible