Mark 5 - DBY (Kannada)

1 And they came to the other side of the sea, to the country of the Gadarenes.ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.

2 And immediately on his going out of the ship there met him out of the tombs a man possessed by an unclean spirit,ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.

3 who had his dwelling in the tombs; and no one was able to bind him, not even with chains;ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.

4 because he had been often bound with fetters and chains, and the chains had been torn asunder by him, and the fetters were shattered; and no one was able to subdue him.ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.

5 And continually night and day, in the tombs and in the mountains, he was crying and cutting himself with stones.ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.

6 But seeing Jesus from afar off, he ran and did him homage,ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --

7 and crying with a loud voice he says, What have I to do with thee, Jesus, Son of the Most High God? I adjure thee by God, torment me not.ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

8 For he said to him, Come forth, unclean spirit, out of the man.ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.

9 And he asked him, What is thy name? And he says to him, Legion is my name, because we are many.ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್‌ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.

10 And he besought him much that he would not send them away out of the country.ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.

11 Now there was there just at the mountain a great herd of swine feeding;ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.

12 and they besought him, saying, Send us into the swine that we may enter into them.ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.

13 And Jesus [immediately] allowed them. And the unclean spirits going out entered into the swine, and the herd rushed down the steep slope, into the sea (about two thousand), and were choked in the sea.ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)

14 And those that were feeding them fled and reported it in the city and in the country. And they went out to see what it was that had taken place.ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.

15 And they come to Jesus, and they see the possessed of demons sitting [and] clothed and sensible, [him] that had had the legion: and they were afraid.ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.

16 And they that had seen [it] related to them how it had happened to the [man] possessed by demons, and concerning the swine.ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.

17 And they began to beg him to depart from their coasts.ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.

18 And as he went on board ship, the man that had been possessed by demons besought him that he might be with him.ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.

19 And he suffered him not, but says to him, Go to thine home to thine own people, and tell them how great things the Lord has done for thee, and has had mercy on thee.ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.

20 And he went away and began to proclaim in the Decapolis how great things Jesus had done for him; and all wondered.ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.

21 And Jesus having passed over in the ship again to the other side, a great crowd gathered to him; and he was by the sea.ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.

22 And [behold] there comes one of the rulers of the synagogue, by name Jairus, and seeing him, falls down at his feet;ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--

23 and he besought him much, saying, My little daughter is at extremity; [I pray] that thou shouldest come and lay thy hands upon her so that she may be healed, and may live.ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

24 And he went with him, and a large crowd followed him and pressed on him.ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.

25 And a certain woman who had had a flux of blood twelve years,ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು

26 and had suffered much under many physicians, and had spent everything she had and had found no advantage from it, but had rather got worse,ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.

27 having heard concerning Jesus, came in the crowd behind and touched his clothes;ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.

28 for she said, If I shall touch but his clothes I shall be healed.ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.

29 And immediately her fountain of blood was dried up, and she knew in her body that she was cured from the scourge.ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.

30 And immediately Jesus, knowing in himself the power that had gone out of him, turning round in the crowd said, Who has touched my clothes?ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು

31 And his disciples said to him, Thou seest the crowd pressing on thee, and sayest thou, Who touched me?ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.

32 And he looked round about to see her who had done this.ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.

33 But the woman, frightened and trembling, knowing what had taken place in her, came and fell down before him, and told him all the truth.ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.

34 And he said to her, Daughter, thy faith has healed thee; go in peace, and be well of thy scourge.ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.

35 While he was yet speaking, they come from the ruler of the synagogue's [house], saying, Thy daughter has died, why troublest thou the teacher any further?ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.

36 But Jesus [immediately], having heard the word spoken, says to the ruler of the synagogue, Fear not; only believe.ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.

37 And he suffered no one to accompany him save Peter and James, and John the brother of James.ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.

38 And he comes to the house of the ruler of the synagogue, and sees the tumult, and people weeping and wailing greatly.ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.

39 And entering in he says to them, Why do ye make a tumult and weep? the child has not died, but sleeps.ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.

40 And they derided him. But he, having put [them] all out, takes with [him] the father of the child, and the mother, and those that were with him, and enters in where the child was lying.ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.

41 And having laid hold of the hand of the child, he says to her, Talitha koumi, which is, interpreted, Damsel, I say to thee, Arise.ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.

42 And immediately the damsel arose and walked, for she was twelve years old. And they were astonished with great astonishment.ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.

43 And he charged them much that no one should know this; and he desired that [something] should be given her to eat.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.

Kannada Bible