Mark 5 - WEB (Kannada)

1 They came to the other side of the sea, into the country of the Gadarenes.ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.

2 When he had come out of the boat, immediately there met him out of the tombs a man with an unclean spirit,ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.

3 who had his dwelling in the tombs. Nobody could bind him any more, not even with chains,ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.

4 because he had been often bound with fetters and chains, and the chains had been torn apart by him, and the fetters broken in pieces. Nobody had the strength to tame him.ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.

5 Always, night and day, in the tombs and in the mountains, he was crying out, and cutting himself with stones.ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.

6 When he saw Jesus from afar, he ran and bowed down to him,ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --

7 and crying out with a loud voice, he said, "What have I to do with you, Jesus, you Son of the Most High God? I adjure you by God, don't torment me."ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

8 For he said to him, "Come out of the man, you unclean spirit!"ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.

9 He asked him, "What is your name?" He said to him, "My name is Legion, for we are many."ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್‌ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.

10 He begged him much that he would not send them away out of the country.ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.

11 Now there was on the mountainside a great herd of pigs feeding.ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.

12 All the demons begged him, saying, "Send us into the pigs, that we may enter into them."ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.

13 At once Jesus gave them permission. The unclean spirits came out and entered into the pigs. The herd of about two thousand rushed down the steep bank into the sea, and they were drowned in the sea.ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)

14 Those who fed them fled, and told it in the city and in the country. The people came to see what it was that had happened.ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.

15 They came to Jesus, and saw him who had been possessed by demons sitting, clothed, and in his right mind, even him who had the legion; and they were afraid.ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.

16 Those who saw it declared to them how it happened to him who was possessed by demons, and about the pigs.ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.

17 They began to beg him to depart from their region.ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.

18 As he was entering into the boat, he who had been possessed by demons begged him that he might be with him.ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.

19 He didn't allow him, but said to him, "Go to your house, to your friends, and tell them what great things the Lord has done for you, and how he had mercy on you."ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.

20 He went his way, and began to proclaim in Decapolis how Jesus had done great things for him, and everyone marveled.ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.

21 When Jesus had crossed back over in the boat to the other side, a great multitude was gathered to him; and he was by the sea.ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.

22 Behold, one of the rulers of the synagogue, Jairus by name, came; and seeing him, he fell at his feet,ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--

23 and begged him much, saying, "My little daughter is at the point of death. Please come and lay your hands on her, that she may be made healthy, and live."ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

24 He went with him, and a great multitude followed him, and they pressed upon him on all sides.ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.

25 A certain woman, who had an issue of blood for twelve years,ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು

26 and had suffered many things by many physicians, and had spent all that she had, and was no better, but rather grew worse,ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.

27 having heard the things concerning Jesus, came up behind him in the crowd, and touched his clothes.ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.

28 For she said, "If I just touch his clothes, I will be made well."ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.

29 Immediately the flow of her blood was dried up, and she felt in her body that she was healed of her affliction.ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.

30 Immediately Jesus, perceiving in himself that the power had gone out from him, turned around in the crowd, and asked, "Who touched my clothes?"ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು

31 His disciples said to him, "You see the multitude pressing against you, and you say, 'Who touched me?'"ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.

32 He looked around to see her who had done this thing.ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.

33 But the woman, fearing and trembling, knowing what had been done to her, came and fell down before him, and told him all the truth.ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.

34 He said to her, "Daughter, your faith has made you well. Go in peace, and be cured of your disease."ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.

35 While he was still speaking, they came from the synagogue ruler's house saying, "Your daughter is dead. Why bother the Teacher any more?"ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.

36 But Jesus, when he heard the message spoken, immediately said to the ruler of the synagogue, "Don't be afraid, only believe."ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.

37 He allowed no one to follow him, except Peter, James, and John the brother of James.ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.

38 He came to the synagogue ruler's house, and he saw an uproar, weeping, and great wailing.ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.

39 When he had entered in, he said to them, "Why do you make an uproar and weep? The child is not dead, but is asleep."ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.

40 They ridiculed him. But he, having put them all out, took the father of the child and her mother and those who were with him, and went in where the child was lying.ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.

41 Taking the child by the hand, he said to her, "Talitha cumi;" which means, being interpreted, "Girl, I tell you, get up."ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.

42 Immediately the girl rose up, and walked, for she was twelve years old. They were amazed with great amazement.ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.

43 He strictly ordered them that no one should know this, and commanded that something should be given to her to eat.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.

Kannada Bible