1ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ--And the LORD spake unto Moses and unto Aaron, saying,
2ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.Every man of the children of Israel shall pitch by his own standard, with the ensign of their father's house: far off about the tabernacle of the congregation shall they pitch.
3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.And on the east side toward the rising of the sun shall they of the standard of the camp of Judah pitch throughout their armies: and Nahshon the son of Amminadab shall be captain of the children of Judah.
4ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.And his host, and those that were numbered of them, were threescore and fourteen thousand and six hundred.
5ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.And those that do pitch next unto him shall be the tribe of Issachar: and Nethaneel the son of Zuar shall be captain of the children of Issachar.
6ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.And his host, and those that were numbered thereof, were fifty and four thousand and four hundred.
7ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.Then the tribe of Zebulun: and Eliab the son of Helon shall be captain of the children of Zebulun.
8ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು.And his host, and those that were numbered thereof, were fifty and seven thousand and four hundred.
9ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.All that were numbered in the camp of Judah were an hundred thousand and fourscore thousand and six thousand and four hundred, throughout their armies. These shall first set forth.
10ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;On the south side shall be the standard of the camp of Reuben according to their armies: and the captain of the children of Reuben shall be Elizur the son of Shedeur.
11ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.And his host, and those that were numbered thereof, were forty and six thousand and five hundred.
12ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;And those which pitch by him shall be the tribe of Simeon: and the captain of the children of Simeon shall be Shelumiel the son of Zurishaddai.
13ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.And his host, and those that were numbered of them, were fifty and nine thousand and three hundred.
14ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;Then the tribe of Gad: and the captain of the sons of Gad shall be Eliasaph the son of Reuel.
15ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.And his host, and those that were numbered of them, were forty and five thousand and six hundred and fifty.
16ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.All that were numbered in the camp of Reuben were an hundred thousand and fifty and one thousand and four hundred and fifty, throughout their armies. And they shall set forth in the second rank.
17ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.Then the tabernacle of the congregation shall set forward with the camp of the Levites in the midst of the camp: as they encamp, so shall they set forward, every man in his place by their standards.
18ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.On the west side shall be the standard of the camp of Ephraim according to their armies: and the captain of the sons of Ephraim shall be Elishama the son of Ammihud.
19ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.And his host, and those that were numbered of them, were forty thousand and five hundred.
20ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.And by him shall be the tribe of Manasseh: and the captain of the children of Manasseh shall be Gamaliel the son of Pedahzur.
21ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.And his host, and those that were numbered of them, were thirty and two thousand and two hundred.
22ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.Then the tribe of Benjamin: and the captain of the sons of Benjamin shall be Abidan the son of Gideoni.
23ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.And his host, and those that were numbered of them, were thirty and five thousand and four hundred.
24ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.All that were numbered of the camp of Ephraim were an hundred thousand and eight thousand and an hundred, throughout their armies. And they shall go forward in the third rank.
25ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.The standard of the camp of Dan shall be on the north side by their armies: and the captain of the children of Dan shall be Ahiezer the son of Ammishaddai.
26ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.And his host, and those that were numbered of them, were threescore and two thousand and seven hundred.
27ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;And those that encamp by him shall be the tribe of Asher: and the captain of the children of Asher shall be Pagiel the son of Ocran.
28ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು.And his host, and those that were numbered of them, were forty and one thousand and five hundred.
29ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.Then the tribe of Naphtali: and the captain of the children of Naphtali shall be Ahira the son of Enan.
30ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.And his host, and those that were numbered of them, were fifty and three thousand and four hundred.
31ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.All they that were numbered in the camp of Dan were an hundred thousand and fifty and seven thousand and six hundred. They shall go hindmost with their standards.
32ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.These are those which were numbered of the children of Israel by the house of their fathers: all those that were numbered of the camps throughout their hosts were six hundred thousand and three thousand and five hundred and fifty.
33ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.But the Levites were not numbered among the children of Israel; as the LORD commanded Moses.
34ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.And the children of Israel did according to all that the LORD commanded Moses: so they pitched by their standards, and so they set forward, every one after their families, according to the house of their fathers.