Numbers 32 - WEB (Kannada)

1 Now the children of Reuben and the children of Gad had a very great multitude of cattle: and when they saw the land of Jazer, and the land of Gilead, that behold, the place was a place for cattle;ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

2 the children of Gad and the children of Reuben came and spoke to Moses, and to Eleazar the priest, and to the princes of the congregation, saying,ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--

3 Ataroth, and Dibon, and Jazer, and Nimrah, and Heshbon, and Elealeh, and Sebam, and Nebo, and Beon,ಅಟಾರೋತ್‌, ದೀಬೋನ್‌, ಯಗ್ಜೇರ್‌, ನಿಮ್ರಾ, ಹೆಷ್ಬೋನ್‌, ಎಲೆಯಾಲೆ, ಸೆಬಾಮ್‌, ನೆಬೋ, ಬೆಯೋನ್‌ ಎಂಬವುಗಳೂ

4 the land which Yahweh struck before the congregation of Israel, is a land for cattle; and your servants have cattle.ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.

5 They said, If we have found favor in your sight, let this land be given to your servants for a possession; don't bring us over the Jordan.ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್‌ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.

6 Moses said to the children of Gad, and to the children of Reuben, Shall your brothers go to the war, and shall you sit here?ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?

7 Why discourage you the heart of the children of Israel from going over into the land which Yahweh has given them?ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್‌ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?

8 Thus did your fathers, when I sent them from Kadesh-barnea to see the land.ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

9 For when they went up to the valley of Eshcol, and saw the land, they discouraged the heart of the children of Israel, that they should not go into the land which Yahweh had given them.ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.

10 Yahweh's anger was kindled in that day, and he swore, saying,ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--

11 Surely none of the men who came up out of Egypt, from twenty years old and upward, shall see the land which I swore to Abraham, to Isaac, and to Jacob; because they have not wholly followed me:ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ

12 save Caleb the son of Jephunneh the Kenizzite, and Joshua the son of Nun; because they have wholly followed Yahweh.ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.

13 Yahweh's anger was kindled against Israel, and he made them wander back and forth in the wilderness forty years, until all the generation, who had done evil in the sight of Yahweh, was consumed.ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.

14 Behold, you are risen up in your fathers' place, an increase of sinful men, to augment yet the fierce anger of Yahweh toward Israel.ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.

15 For if you turn away from after him, he will yet again leave them in the wilderness; and you will destroy all this people.ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.

16 They came near to him, and said, We will build sheepfolds here for our cattle, and cities for our little ones:ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.

17 but we ourselves will be ready armed to go before the children of Israel, until we have brought them to their place: and our little ones shall dwell in the fortified cities because of the inhabitants of the land.ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.

18 We will not return to our houses, until the children of Israel have inherited every man his inheritance.ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.

19 For we will not inherit with them on the other side of the Jordan, and forward; because our inheritance is fallen to us on this side of the Jordan eastward.ನಾವು ಯೊರ್ದನ್‌ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್‌ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.

20 Moses said to them, If you will do this thing, if you will arm yourselves to go before Yahweh to the war,ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ

21 and every armed man of you will pass over the Jordan before Yahweh, until he has driven out his enemies from before him,ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್‌ ನದಿಯನ್ನು ದಾಟಿದರೆ

22 and the land is subdued before Yahweh; then afterward you shall return, and be guiltless towards Yahweh, and towards Israel; and this land shall be to you for a possession before Yahweh.ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.

23 But if you will not do so, behold, you have sinned against Yahweh; and be sure your sin will find you out.ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.

24 Build you cities for your little ones, and folds for your sheep; and do that which has proceeded out of your mouth.ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.

25 The children of Gad and the children of Reuben spoke to Moses, saying, Your servants will do as my lord commands.ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.

26 Our little ones, our wives, our flocks, and all our cattle, shall be there in the cities of Gilead;ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.

27 but your servants will pass over, every man who is armed for war, before Yahweh to battle, as my lord says.ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.

28 So Moses gave charge concerning them to Eleazar the priest, and to Joshua the son of Nun, and to the heads of the fathers' [houses] of the tribes of the children of Israel.ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.

29 Moses said to them, If the children of Gad and the children of Reuben will pass with you over the Jordan, every man who is armed to battle, before Yahweh, and the land shall be subdued before you; then you shall give them the land of Gilead for a possession:ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್‌ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್‌ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.

30 but if they will not pass over with you armed, they shall have possessions among you in the land of Canaan.ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್‌ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.

31 The children of Gad and the children of Reuben answered, saying, As Yahweh has said to your servants, so will we do.ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.

32 We will pass over armed before Yahweh into the land of Canaan, and the possession of our inheritance [shall remain] with us beyond the Jordan.ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.

33 Moses gave to them, even to the children of Gad, and to the children of Reuben, and to the half-tribe of Manasseh the son of Joseph, the kingdom of Sihon king of the Amorites, and the kingdom of Og king of Bashan, the land, according to the cities of it with [their] borders, even the cities of the land round about.ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.

34 The children of Gad built Dibon, and Ataroth, and Aroer,ಆಗ ಗಾದನ ಮಕ್ಕಳು ದೀಬೋನ್‌, ಅಟಾರೋತ್‌, ಆರೋಯೇರ್‌,

35 and Atrothshophan, and Jazer, and Jogbehah,ಅಟ್ರೋತ್ಪೊ ಫಾನ್‌, ಯಗ್ಜೇರ್‌, ಯೊಗ್ಬೆಹಾ, ಬೇತ್ನಿಮ್ರಾ,

36 and Beth Nimrah, and Beth Haran: fortified cities, and folds for sheep.ಬೇತ್‌ ಹಾರಾನ್‌ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.

37 The children of Reuben built Heshbon, and Elealeh, and Kiriathaim,ರೂಬೇನನ ಮಕ್ಕಳು ಹೆಷ್ಬೋನ್‌, ಎಲೀಯಾಲೆ, ಕಿರ್ಯಾತಯಿಮ್‌,

38 and Nebo, and Baal Meon, (their names being changed), and Sibmah: and they gave other names to the cities which they built.ನೆಬೋ, ಬಾಳ್ಮೆಯೋನ್‌ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.

39 The children of Machir the son of Manasseh went to Gilead, and took it, and dispossessed the Amorites who were therein.ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್‌ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.

40 Moses gave Gilead to Machir the son of Manasseh; and he lived therein.ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.

41 Jair the son of Manasseh went and took the towns of it, and called them Havvoth Jair.ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.

42 Nobah went and took Kenath, and the villages of it, and called it Nobah, after his own name.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.

Kannada Bible