Numbers 34 - BBE (Kannada)
1 And the Lord said to Moses,ಕರ್ತನು ಮೋಶೆಯ ಸಂಗಡ ಮಾತನಾಡಿ--
2 Give orders to the children of Israel and say to them, When you come into the land of Canaan; (this is the land which is to be your heritage, the land of Canaan inside these limits,)ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
3 Then your south quarter will be from the waste land of Zin by the side of Edom, and your limit on the south will be from the east end of the Salt Sea,ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
4 And round to the south of the slope of Akrabbim, and on to Zin: and its direction will be south of Kadesh-barnea, and it will go as far as Hazar-addar and on to Azmon:ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
5 And from Azmon it will go round to the stream of Egypt as far as the sea.ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
6 And for your limit on the west you will have the Great Sea and its edge: this will be your limit on the west.ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
7 And your limit on the north will be the line from the Great Sea to Mount Hor:ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
8 And from Mount Hor the line will go in the direction of Hamath; the farthest point of it will be at Zedad:ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
9 And the limit will go on to Ziphron, with its farthest point at Hazar-enan: this will be your limit on the north.ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
10 And on the east, your limit will be marked out from Hazar-enan to Shepham,ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
11 Going down from Shepham to Riblah on the east side of Ain, and on as far as the east side of the sea of Chinnereth:ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
12 And so down to Jordan, stretching to the Salt Sea: all the land inside these limits will be yours.ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
13 And Moses gave orders to the children of Israel saying, This is the land which is to be your heritage, by the decision of the Lord, which by the Lord's order is to be given to the nine tribes and the half-tribe:ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
14 For the tribe of the children of Reuben, by their fathers' families, and the tribe of the children of Gad, by their fathers' families, and the half-tribe of Manasseh, have been given their heritage:ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
15 The two tribes and the half-tribe have been given their heritage on the other side of Jordan at Jericho, on the east looking to the dawn.ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
16 And the Lord said to Moses,ಕರ್ತನು ಮೋಶೆಯ ಸಂಗಡ ಮಾತನಾಡಿ
17 These are the names of the men who are to make the distribution of the land among you: Eleazar the priest and Joshua, the son of Nun.ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
18 And you are to take one chief from every tribe to make the distribution of the land.ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.
19 And these are the names of the men: of the tribe of Judah, Caleb, the son of Jephunneh.ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ
20 And of the tribe of the children of Simeon, Shemuel, the son of Ammihud.ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ
21 Of the tribe of Benjamin, Elidad, the son of Chislon.ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ
22 And of the tribe of the children of Dan, a chief, Bukki, the son of Jogli.ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ
23 Of the children of Joseph: of the tribe of the children of Manasseh, a chief, Hanniel, the son of Ephod:ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ
24 And of the tribe of the children of Ephraim, a chief, Kemuel, the son of Shiphtan.ಎಫ್ರಾಯಾಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ
25 And of the tribe of the children of Zebulun, a chief, Elizaphan, the son of Parnach.ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ
26 And of the tribe of the children of Issachar, a chief, Paltiel, the son of Azzan.ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ
27 And of the tribe of the children of Asher, a chief, Ahihud, the son of Shelomi.ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ
28 And of the tribe of the children of Naphtali, a chief, Pedahel, the son of Ammihud.ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.
29 These are they to whom the Lord gave orders to make the distribution of the heritage among the children of Israel in the land of Canaan.ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
Kannada Bible