1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.The wicked flee when no man pursueth: but the righteous are bold as a lion.
2ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.For the transgression of a land many are the princes thereof: but by a man of understanding and knowledge the state thereof shall be prolonged.
3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.A poor man that oppresseth the poor is like a sweeping rain which leaveth no food.
4ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.They that forsake the law praise the wicked: but such as keep the law contend with them.
5ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.Evil men understand not judgment: but they that seek the LORD understand all things.
6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.Better is the poor that walketh in his uprightness, than he that is perverse in his ways, though he be rich.
7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.Whoso keepeth the law is a wise son: but he that is a companion of riotous men shameth his father.
8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.He that by usury and unjust gain increaseth his substance, he shall gather it for him that will pity the poor.
9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.He that turneth away his ear from hearing the law, even his prayer shall be abomination.
10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.Whoso causeth the righteous to go astray in an evil way, he shall fall himself into his own pit: but the upright shall have good things in possession.
11ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.The rich man is wise in his own conceit; but the poor that hath understanding searcheth him out.
12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.When righteous men do rejoice, there is great glory: but when the wicked rise, a man is hidden.
13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.He that covereth his sins shall not prosper: but whoso confesseth and forsaketh them shall have mercy.
14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.Happy is the man that feareth alway: but he that hardeneth his heart shall fall into mischief.
15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.As a roaring lion, and a ranging bear; so is a wicked ruler over the poor people.
16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.The prince that wanteth understanding is also a great oppressor: but he that hateth covetousness shall prolong his days.
17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.A man that doeth violence to the blood of any person shall flee to the pit; let no man stay him.
18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.Whoso walketh uprightly shall be saved: but he that is perverse in his ways shall fall at once.
19ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.He that tilleth his land shall have plenty of bread: but he that followeth after vain persons shall have poverty enough.
20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.A faithful man shall abound with blessings: but he that maketh haste to be rich shall not be innocent.
21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.To have respect of persons is not good: for for a piece of bread that man will transgress.
22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.He that hasteth to be rich hath an evil eye, and considereth not that poverty shall come upon him.
23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.He that rebuketh a man afterwards shall find more favour than he that flattereth with the tongue.
24ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.Whoso robbeth his father or his mother, and saith, It is no transgression; the same is the companion of a destroyer.
25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.He that is of a proud heart stirreth up strife: but he that putteth his trust in the LORD shall be made fat.
26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.He that trusteth in his own heart is a fool: but whoso walketh wisely, he shall be delivered.
27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.He that giveth unto the poor shall not lack: but he that hideth his eyes shall have many a curse.
28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.When the wicked rise, men hide themselves: but when they perish, the righteous increase.