Proverbs 28 - WEB (Kannada)

1 The wicked flee when no one pursues; But the righteous are as bold as a lion.ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.

2 In rebellion, a land has many rulers, But order is maintained by a man of understanding and knowledge.ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.

3 A needy man who oppresses the poor Is like a driving rain which leaves no crops.ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.

4 Those who forsake the law praise the wicked; But those who keep the law contend with them.ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.

5 Evil men don't understand justice; But those who seek Yahweh understand it fully.ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.

6 Better is the poor who walks in his integrity, Than he who is perverse in his ways, and he is rich.ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.

7 Whoever keeps the law is a wise son; But he who is a companion of gluttons shames his father.ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.

8 He who increases his wealth by excessive interest Gathers it for one who has pity on the poor.ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.

9 He who turns away his ear from hearing the law, Even his prayer is an abomination.ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.

10 Whoever causes the upright to go astray in an evil way, He will fall into his own trap; But the blameless will inherit good.ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.

11 The rich man is wise in his own eyes; But the poor who has understanding sees through him.ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.

12 When the righteous triumph, there is great glory; But when the wicked rise, men hide themselves.ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.

13 He who conceals his sins doesn't prosper, But whoever confesses and renounces them finds mercy.ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.

14 Blessed is the man who always fears; But one who hardens his heart falls into trouble.ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.

15 As a roaring lion or a charging bear, So is a wicked ruler over helpless people.ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.

16 A tyrannical ruler lacks judgment. One who hates ill-gotten gain will have long days.ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.

17 A man who is tormented by life blood will be a fugitive until death; No one will support him.ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.

18 Whoever walks blamelessly is kept safe; But one with perverse ways will fall suddenly.ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.

19 One who works his land will have an abundance of food; But one who chases fantasies will have his fill of poverty.ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.

20 A faithful man is rich with blessings; But one who is eager to be rich will not go unpunished.ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.

21 To show partiality is not good; Yet a man will do wrong for a piece of bread.ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.

22 A stingy man hurries after riches, And doesn't know that poverty waits for him.ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.

23 One who rebukes a man will afterward find more favor Than one who flatters with the tongue.ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.

24 Whoever robs his father or his mother, and says, "It's not wrong." He is a partner with a destroyer.ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.

25 One who is greedy stirs up strife; But one who trusts in Yahweh will prosper.ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.

26 One who trusts in himself is a fool; But one who walks in wisdom, he is kept safe.ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.

27 One who gives to the poor has no lack; But one who closes his eyes will have many curses.ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.

28 When the wicked rise, men hide themselves; But when they perish, the righteous thrive.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.

Kannada Bible