Proverbs 29 - YLT (Kannada)

1 A man often reproved, hardening the neck, Is suddenly broken, and there is no healing.ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.

2 In the multiplying of the righteous the people rejoice, And in the ruling of the wicked the people sigh.ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

3 A man loving wisdom rejoiceth his father, And a friend of harlots destroyeth wealth.ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.

4 A king by judgment establisheth a land, And one receiving gifts throweth it down.ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.

5 A man taking a portion above his neighbour, Spreadeth a net for his own steps.ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.

6 In the transgression of the evil `is' a snare, And the righteous doth sing and rejoice.ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.

7 The righteous knoweth the plea of the poor, The wicked understandeth not knowledge.ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.

8 Men of scorning ensnare a city, And the wise turn back anger.ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.

9 A wise man is judged by the foolish man, And he hath been angry, And he hath laughed, and there is no rest.ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.

10 Men of blood hate the perfect, And the upright seek his soul.ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

11 A fool bringeth out all his mind, And the wise till afterwards restraineth it.ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.

12 A ruler who is attending to lying words, All his ministers `are' wicked.ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.

13 The poor and the man of frauds have met together, Jehovah is enlightening the eyes of them both.ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.

14 a king that is judging truly the poor, His throne for ever is established.ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.

15 A rod and reproof give wisdom, And a youth let away is shaming his mother.ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.

16 In the multiplying of the wicked transgression multiplieth, And the righteous on their fall do look.ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

17 Chastise thy son, and he giveth thee comfort, Yea, he giveth delights to thy soul.ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.

18 Without a Vision is a people made naked, And whoso is keeping the law, O his happiness!ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.

19 By words a servant is not instructed though he understand, And there is nothing answering.ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.

20 Thou hast seen a man hasty in his words! More hope of a fool than of him.ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.

21 Whoso is bringing up his servant delicately, from youth, `At' his latter end also he is continuator.ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.

22 An angry man stirreth up contention, And a furious man is multiplying transgression.ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

23 The pride of man humbleth him, And humility of spirit upholdeth honour.ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.

24 Whoso is sharing with a thief is hating his own soul, Execration he heareth, and telleth not.ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.

25 Fear of man causeth a snare, And the confident in Jehovah is set on high.ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.

26 Many are seeking the face of a ruler, And from Jehovah `is' the judgment of each.ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.

27 An abomination to the righteous `is' the perverse man, And an abomination to the wicked `is' the upright in the way!ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.

Kannada Bible