Proverbs 3 - WEB (Kannada)
1 My son, don't forget my teaching; But let your heart keep my commandments:ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
2 For length of days, and years of life, And peace, will they add to you.ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
3 Don't let kindness and truth forsake you. Bind them around your neck. Write them on the tablet of your heart.ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
4 So you will find favor, And good understanding in the sight of God and man.ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
5 Trust in Yahweh with all your heart, And don't lean on your own understanding.ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
6 In all your ways acknowledge him, And he will direct your paths.ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
7 Don't be wise in your own eyes. Fear Yahweh, and depart from evil.ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
8 It will be health to your body, And nourishment to your bones.ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
9 Honor Yahweh with your substance, With the first fruits of all your increase:ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
10 So your barns will be filled with plenty, And your vats will overflow with new wine.ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
11 My son, don't despise Yahweh's discipline, Neither be weary of his reproof:ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
12 For whom Yahweh loves, he reproves; Even as a father reproves the son in whom he delights.ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
13 Happy is the man who finds wisdom, The man who gets understanding.ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
14 For her good profit is better than getting silver, And her return is better than fine gold.ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
15 She is more precious than rubies. None of the things you can desire are to be compared to her.ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
16 Length of days is in her right hand. In her left hand are riches and honor.ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
17 Her ways are ways of pleasantness. All her paths are peace.ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
18 She is a tree of life to those who lay hold of her. Happy is everyone who retains her.ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
19 By wisdom Yahweh founded the earth. By understanding, he established the heavens.ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
20 By his knowledge, the depths were broken up, And the skies drop down the dew.ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
21 My son, let them not depart from your eyes. Keep sound wisdom and discretion:ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
22 So they will be life to your soul, And grace for your neck.ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
23 Then you shall walk in your way securely. Your foot won't stumble.ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
24 When you lie down, you will not be afraid. Yes, you will lie down, and your sleep will be sweet.ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
25 Don't be afraid of sudden fear, Neither of the desolation of the wicked, when it comes:ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
26 For Yahweh will be your confidence, And will keep your foot from being taken.ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
27 Don't withhold good from those to whom it is due, When it is in the power of your hand to do it.ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
28 Don't say to your neighbor, "Go, and come again, Tomorrow I will give it to you," When you have it by you.ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
29 Don't devise evil against your neighbor, Seeing he dwells securely by you.ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
30 Don't strive with a man without cause, If he has done you no harm.ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
31 Don't envy the man of violence. Choose none of his ways.ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
32 For the perverse is an abomination to Yahweh, But his friendship is with the upright.ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
33 Yahweh's curse is in the house of the wicked, But he blesses the habitation of the righteous.ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
34 Surely he mocks the mockers, But he gives grace to the humble.ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.
35 The wise will inherit glory, But shame will be the promotion of fools.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
Kannada Bible