Proverbs 3 - YLT (Kannada)

1 My son! my law forget not, And my commands let thy heart keep,ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:

2 For length of days and years, Life and peace they do add to thee.ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.

3 Let not kindness and truth forsake thee, Bind them on thy neck, Write them on the tablet of thy heart,ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.

4 And find grace and good understanding In the eyes of God and man.ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.

5 Trust unto Jehovah with all thy heart, And unto thine own understanding lean not.ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.

6 In all thy ways know thou Him, And He doth make straight thy paths.ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.

7 Be not wise in thine own eyes, Fear Jehovah, and turn aside from evil.ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.

8 Healing it is to thy navel, And moistening to thy bones.ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.

9 Honour Jehovah from thy substance, And from the beginning of all thine increase;ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.

10 And filled are thy barns `with' plenty, And `with' new wine thy presses break forth.ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.

11 Chastisement of Jehovah, my son, despise not, And be not vexed with His reproof,ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;

12 For whom Jehovah loveth He reproveth, Even as a father the son He is pleased with.ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.

13 O the happiness of a man `who' hath found wisdom, And of a man `who' bringeth forth understanding.ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.

14 For better `is' her merchandise Than the merchandise of silver, And than gold -- her increase.ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.

15 Precious she `is' above rubies, And all thy pleasures are not comparable to her.ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.

16 Length of days `is' in her right hand, In her left `are' wealth and honour.ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.

17 Her ways `are' ways of pleasantness, And all her paths `are' peace.ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.

18 A tree of life she `is' to those laying hold on her, And whoso is retaining her `is' happy.ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.

19 Jehovah by wisdom did found the earth, He prepared the heavens by understanding.ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.

20 By His knowledge depths have been rent, And clouds do drop dew.ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.

21 My son! let them not turn from thine eyes, Keep thou wisdom and thoughtfulness,ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.

22 And they are life to thy soul, and grace to thy neck.ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.

23 Then thou goest thy way confidently, And thy foot doth not stumble.ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.

24 If thou liest down, thou art not afraid, Yea, thou hast lain down, And sweet hath been thy sleep.ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.

25 Be not afraid of sudden fear, And of the desolation of the wicked when it cometh.ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.

26 For Jehovah is at thy side, And He hath kept thy foot from capture.ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.

27 Withhold not good from its owners, When thy hand `is' toward God to do `it'.ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.

28 Say not thou to thy friend, `Go, and return, and to-morrow I give,' And substance with thee.ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.

29 Devise not against thy neighbour evil, And he sitting confidently with thee.ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.

30 Strive not with a man without cause, If he have not done thee evil.ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.

31 Be not envious of a man of violence, Nor fix thou on any of his ways.ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.

32 For an abomination to Jehovah `is' the perverted, And with the upright `is' His secret counsel.ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.

33 The curse of Jehovah `is' in the house of the wicked. And the habitation of the righteous He blesseth.ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.

34 If the scorners He doth scorn, Yet to the humble He doth give grace.ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.

35 Honour do the wise inherit, And fools are bearing away shame!ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.

Kannada Bible