Proverbs 30 - YLT (Kannada)

1 Words of a Gatherer, son of an obedient one, the declaration, an affirmation of the man: -- I have wearied myself `for' God, I have wearied myself `for' God, and am consumed.ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.

2 For I am more brutish than any one, And have not the understanding of a man.ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.

3 Nor have I learned wisdom, Yet the knowledge of Holy Ones I know.ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.

4 Who went up to heaven, and cometh down? Who hath gathered the wind in his fists? Who hath bound waters in a garment? Who established all ends of the earth? What `is' His name? and what His son's name? Surely thou knowest!ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?

5 Every saying of God `is' tried, A shield He `is' to those trusting in Him.ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.

6 Add not to His words, lest He reason with thee, And thou hast been found false.ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.

7 Two things I have asked from Thee, Withhold not from me before I die.ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;

8 Vanity and a lying word put far from me, Poverty or wealth give not to me, Cause me to eat the bread of my portion,ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;

9 Lest I become satiated, and have denied, And have said, `Who `is' Jehovah?' And lest I be poor, and have stolen, And have laid hold of the name of my God.ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.

10 Accuse not a servant unto his lord, Lest he disesteem thee, and thou be found guilty.ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.

11 A generation `is', that lightly esteemeth their father, And their mother doth not bless.ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.

12 A generation -- pure in their own eyes, But from their own filth not washed.ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.

13 A generation -- how high are their eyes, Yea, their eyelids are lifted up.ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.

14 A generation -- swords `are' their teeth, And knives -- their jaw-teeth, To consume the poor from earth, And the needy from `among' men.ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.

15 To the leech `are' two daughters, `Give, give, Lo, three things are not satisfied, Four have not said `Sufficiency;'ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.

16 Sheol, and a restrained womb, Earth -- it `is' not satisfied `with' water, And fire -- it hath not said, `Sufficiency,'ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.

17 An eye that mocketh at a father, And despiseth to obey a mother, Dig it out do ravens of the valley, And eat it do young eagles.ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.

18 Three things have been too wonderful for me, Yea, four that I have not known:ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--

19 The way of the eagle in the heavens, The way of a serpent on a rock, The way of a ship in the heart of the sea, And the way of a man in youth.ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.

20 So -- the way of an adulterous woman, She hath eaten and hath wiped her mouth, And hath said, `I have not done iniquity.'ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.

21 For three things hath earth been troubled, And for four -- it is not able to bear:ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು

22 For a servant when he reigneth, And a fool when he is satisfied with bread,ಆಳುವ ದಾಸನು, ಹೊಟ್ಟೆತುಂಬಿದ ನೀಚನು,

23 For a hated one when she ruleth, And a maid-servant when she succeedeth her mistress.ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.

24 Four `are' little ones of earth, And they are made wiser than the wise:ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.

25 The ants `are' a people not strong, And they prepare in summer their food,ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.

26 Conies `are' a people not strong, And they place in a rock their house,ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.

27 A king there is not to the locust, And it goeth out -- each one shouting,ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.

28 A spider with two hands taketh hold, And is in the palaces of a king.ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.

29 Three there are going well, Yea, four are good in going:ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.

30 An old lion -- mighty among beasts, That turneth not back from the face of any,ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.

31 A girt one of the loins, or a he-goat, And a king -- no rising up with him.ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.

32 If thou hast been foolish in lifting up thyself, And if thou hast devised evil -- hand to mouth!ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.

33 For the churning of milk bringeth out butter, And the wringing of the nose bringeth out blood, And the forcing of anger bringeth out strife!ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.

Kannada Bible