11 ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.I will love thee, O LORD, my strength.
2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.The LORD is my rock, and my fortress, and my deliverer; my God, my strength, in whom I will trust; my buckler, and the horn of my salvation, and my high tower.
3ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.I will call upon the LORD, who is worthy to be praised: so shall I be saved from mine enemies.
4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.The sorrows of death compassed me, and the floods of ungodly men made me afraid.
5ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.The sorrows of hell compassed me about: the snares of death prevented me.
6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.In my distress I called upon the LORD, and cried unto my God: he heard my voice out of his temple, and my cry came before him, even into his ears.
7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;Then the earth shook and trembled; the foundations also of the hills moved and were shaken, because he was wroth.
8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.There went up a smoke out of his nostrils, and fire out of his mouth devoured: coals were kindled by it.
9ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.He bowed the heavens also, and came down: and darkness was under his feet.
10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.And he rode upon a cherub, and did fly: yea, he did fly upon the wings of the wind.
11ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.He made darkness his secret place; his pavilion round about him were dark waters and thick clouds of the skies.
12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.At the brightness that was before him his thick clouds passed, hail stones and coals of fire.
13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನುThe LORD also thundered in the heavens, and the Highest gave his voice; hail stones and coals of fire.
14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.Yea, he sent out his arrows, and scattered them; and he shot out lightnings, and discomfited them.
15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.Then the channels of waters were seen, and the foundations of the world were discovered at thy rebuke, O LORD, at the blast of the breath of thy nostrils.
16ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.He sent from above, he took me, he drew me out of many waters.
17ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.He delivered me from my strong enemy, and from them which hated me: for they were too strong for me.
18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.They prevented me in the day of my calamity: but the LORD was my stay.
19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.He brought me forth also into a large place; he delivered me, because he delighted in me.
20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.The LORD rewarded me according to my righteousness; according to the cleanness of my hands hath he recompensed me.
21ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.For I have kept the ways of the LORD, and have not wickedly departed from my God.
22ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.For all his judgments were before me, and I did not put away his statutes from me.
23ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.I was also upright before him, and I kept myself from mine iniquity.
24ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.Therefore hath the LORD recompensed me according to my righteousness, according to the cleanness of my hands in his eyesight.
25ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.With the merciful thou wilt shew thyself merciful; with an upright man thou wilt shew thyself upright;
26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.With the pure thou wilt shew thyself pure; and with the froward thou wilt shew thyself froward.
27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.For thou wilt save the afflicted people; but wilt bring down high looks.
28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.For thou wilt light my candle: the LORD my God will enlighten my darkness.
29ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.For by thee I have run through a troop; and by my God have I leaped over a wall.
30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.As for God, his way is perfect: the word of the LORD is tried: he is a buckler to all those that trust in him.
31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?For who is God save the LORD? or who is a rock save our God?
32ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.It is God that girdeth me with strength, and maketh my way perfect.
33ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.He maketh my feet like hinds' feet, and setteth me upon my high places.
34ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.He teacheth my hands to war, so that a bow of steel is broken by mine arms.
35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.Thou hast also given me the shield of thy salvation: and thy right hand hath holden me up, and thy gentleness hath made me great.
36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.Thou hast enlarged my steps under me, that my feet did not slip.
37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.I have pursued mine enemies, and overtaken them: neither did I turn again till they were consumed.
38ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.I have wounded them that they were not able to rise: they are fallen under my feet.
39ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.For thou hast girded me with strength unto the battle: thou hast subdued under me those that rose up against me.
40ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.Thou hast also given me the necks of mine enemies; that I might destroy them that hate me.
41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.They cried, but there was none to save them: even unto the LORD, but he answered them not.
42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.Then did I beat them small as the dust before the wind: I did cast them out as the dirt in the streets.
43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.Thou hast delivered me from the strivings of the people; and thou hast made me the head of the heathen: a people whom I have not known shall serve me.
44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.As soon as they hear of me, they shall obey me: the strangers shall submit themselves unto me.
45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.The strangers shall fade away, and be afraid out of their close places.
46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.The LORD liveth; and blessed be my rock; and let the God of my salvation be exalted.
47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.It is God that avengeth me, and subdueth the people under me.
48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.He delivereth me from mine enemies: yea, thou liftest me up above those that rise up against me: thou hast delivered me from the violent man.
49ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.Therefore will I give thanks unto thee, O LORD, among the heathen, and sing praises unto thy name.
50ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.Great deliverance giveth he to his king; and sheweth mercy to his anointed, to David, and to his seed for evermore.