Romans 13 - ASV (Kannada)

1 Let every soul be in subjection to the higher powers: for there is no power but of God; and the `powers' that be are ordained of God.ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.

2 Therefore he that resisteth the power, withstandeth the ordinance of God: and they that withstand shall receive to themselves judgment.ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.

3 For rulers are not a terror to the good work, but to the evil. And wouldest thou have no fear of the power? do that which is good, and thou shalt have praise from the same:ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.

4 for he is a minister of God to thee for good. But if thou do that which is evil, be afraid; for he beareth not the sword in vain: for he is a minister of God, an avenger for wrath to him that doeth evil.ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.

5 Wherefore `ye' must needs be in subjection, not only because of the wrath, but also for conscience' sake.ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.

6 For this cause ye pay tribute also; for they are ministers of God's service, attending continually upon this very thing.ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.

7 Render to all their dues: tribute to whom tribute `is due'; custom to whom custom; fear to whom fear; honor to whom honor.ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

8 Owe no man anything, save to love one another: for he that loveth his neighbor hath fulfilled the law.ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.

9 For this, Thou shalt not commit adultery, Thou shalt not kill, Thou shalt not steal, Thou shalt not covet, and if there be any other commandment, it is summed up in this word, namely, Thou shalt love thy neighbor as thyself.ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

10 Love worketh no ill to his neighbor: love therefore is the fulfilment of the law.ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.

11 And this, knowing the season, that already it is time for you to awake out of sleep: for now is salvation nearer to us than when we `first' believed.ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.

12 The night is far spent, and the day is at hand: let us therefore cast off the works of darkness, and let us put on the armor of light.ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.

13 Let us walk becomingly, as in the day; not in revelling and drunkenness, not in chambering and wantonness, not in strife and jealousy.ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

14 But put ye on the Lord Jesus Christ, and make not provision for the flesh, to `fulfil' the lusts `thereof'.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

Kannada Bible