Romans 16 - WEB (Kannada)

1 I commend to you Phoebe, our sister, who is a servant{literally, deacon} of the assembly that is at Cenchreae,​ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.

2 that you receive her in the Lord, in a way worthy of the saints, and that you assist her in whatever matter she may need from you, for she herself also has been a helper of many, and of my own self.ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.

3 Greet Prisca and Aquila, my fellow workers in Christ Jesus,ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.

4 who for my life, laid down their own necks; to whom not only I give thanks, but also all the assemblies of the Gentiles.ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.

5 Greet the assembly that is in their house. Greet Epaenetus, my beloved, who is the first fruits of Achaia to Christ.ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.

6 Greet Mary, who labored much for us.ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.

7 Greet Andronicus and Junias, my relatives and my fellow prisoners, who are notable among the apostles, who also were in Christ before me.ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.

8 Greet Amplias, my beloved in the Lord.ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.

9 Greet Urbanus, our fellow worker in Christ, and Stachys, my beloved.ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.

10 Greet Apelles, the approved in Christ. Greet those who are of the household of Aristobulus.ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.

11 Greet Herodion, my kinsman. Greet them of the household of Narcissus, who are in the Lord.ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.

12 Greet Tryphaena and Tryphosa, who labor in the Lord. Greet Persis, the beloved, who labored much in the Lord.ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.

13 Greet Rufus, the chosen in the Lord, and his mother and mine.ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.

14 Greet Asyncritus, Phlegon, Hermes, Patrobas, Hermas, and the brothers{The word for "brothers" here and where context allows may also be correctly translated "brothers and sisters" or "siblings."} who are with them.ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.

15 Greet Philologus and Julia, Nereus and his sister, and Olympas, and all the saints who are with them.ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.

16 Greet one another with a holy kiss. The assemblies of Christ greet you.ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.

17 Now I beg you, brothers, look out for those who are causing the divisions and occasions of stumbling, contrary to the doctrine which you learned, and turn away from them.ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

18 For those who are such don't serve our Lord, Jesus Christ, but their own belly; and by their smooth and flattering speech, they deceive the hearts of the innocent.ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

19 For your obedience has become known to all. I rejoice therefore over you. But I desire to have you wise in that which is good, but innocent in that which is evil.ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

20 And the God of peace will quickly crush Satan under your feet. The grace of our Lord Jesus Christ be with you.ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

21 Timothy, my fellow worker, greets you, as do Lucius, Jason, and Sosipater, my relatives.ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

22 I, Tertius, who write the letter, greet you in the Lord.ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.

23 Gaius, my host and host of the whole assembly, greets you. Erastus, the treasurer of the city, greets you, as does Quartus, the brother.ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

24 The grace of our Lord Jesus Christ be with you all! Amen.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

25 {See Romans 14:23}ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ

26 {See Romans 14:23}ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

27 {See Romans 14:23} {TR places Romans 14:24-26 at the end of Romans instead of at the end of chapter 14, and numbers these verses 16:25-27.}ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.

Kannada Bible